ಹೊನ್ನಾವರ: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆಯಾಗಿ ಓರ್ವ ಮೀನುಗಾರ ನಾಪತ್ತೆಯಾಗಿ, ಮೂವರನ್ನು ರಕ್ಷಿಸಿರೋ ಘಟನೆ ಹೊನ್ನಾವರದ ಕಾಸರಕೋಡು ಇಕೋ ಬೀಚ್‌ನಲ್ಲಿ ನಡೆದಿದೆ.
ಉದಯ ದಾಮೋದರ ತಾಂಡೇಲ್ ಕಾಣೆಯಾದ ಮೀನುಗಾರನಾಗಿದ್ದು, ವಿಜಯ್ ಫರ್ನಾಂಡೀಸ್, ಶಂಕರ್ ತಾಂಡೇಲ್, ಕಾಮೇಶ್ವರ ತಾಂಡೇಲ್ ಎಂಬುವವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ಇಂದು ಬೆಳಿಗ್ಗೆ ಮೀನುಗಾರಿಕೆಗಾಗಿ ತಮ್ಮ ಬೋಟ್ ಮೂಲಕ ಸಮುದ್ರಕ್ಕಿಳಿದಿದ್ದ ಮೀನುಗಾರರು, ವಾಪಸ್ಸಾಗುವಾಗ ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮುಳುಗಡೆಯಾಗಿ ದುರಂತ ಸಂಭವಿಸಿದೆ.
ಕಾಣೆಯಾದ ಮೀನುಗಾರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.