ಚಲಿಸುತ್ತಿದ್ದ ಕಾರು ನೋಡ ನೋಡುತ್ತಿದ್ದಂತೆ ಬೆಂಕಿಗೆ ಆಹುತಿ..! ಕಾರಲ್ಲಿ ಇದ್ದವರ ಗತಿ ಏನಾಯ್ತು..?

ಹುಬ್ಬಳ್ಳಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಬ್ರಿಜಾ ಕಾರು ನಡುರಸ್ತೆಯಲ್ಲೇ ಹೊತ್ತಿ ಉರಿದು ಬೆಂಕಿಗೆ ಆಹುತಿಯಾದ ಘಟನೆ ಹುಬ್ಬಳ್ಳಿ-ಧಾರವಾಡ ರಸ್ತೆಯ ನವನಗರದ ಬಳಿ ನಡೆದಿದೆ.

ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಕೆಳಗಿಳಿದು ಇಬ್ಬರೂ ಪಾರಾಗಿದ್ದಾರೆ.
ಸ್ಥಳಕ್ಕೆಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

error: Content is protected !!