ಶಿರಸಿ: ನಗರದಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ, ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ನಡೆಯಿತು.
ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು.
ಕಾಂಗ್ರೆಸ್ ಹಿರಿಯ ಮುಖಂಡ ಆರ್. ವಿ.ದೇಶಪಾಂಡೆ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು.