ಬೆಂಗಳೂರು : ಕೊರೋನಾ ಸೋಂಕಿನ ಇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ಎಲ್ಲಾ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ.
ಕೊರೋನಾ ಮಾರ್ಗಸೂಚಿಗಳನ್ನು ಕಾಲೇಜುಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು. ಅಲ್ಲದೇ ಕಾಲೇಜುಗಳಲ್ಲಿ ಆಫ್‌ಲೈನ್ ತರಗತಿಗಳಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂಧಿಗಳು ಕಡ್ಡಾಯವಾಗಿ ಒಂದು ಡೋಸ್ ಕೊರೋನಾ ಲಸಿಕೆಯನ್ನು ಪಡೆದಿರಬೇಕು.
ಕಾಲೇಜುಗಳಲ್ಲಿ ಕೊರೋನಾ ನಿಯಮ ಉಲ್ಲಂಘನೆಯಾದ್ರೆ ಅಂತಹ ಸಂದರ್ಭದಲ್ಲಿ ಕಾಲೇಜುಗಳ ವಿರುದ್ದ ಕೊರೋನಾ ಸೋಂಕಿನ ನಿಯಂತ್ರಣ ಕಾನೂನು ಕ್ರಮ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ರಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ಎಚ್ಚರಿಕೆಯನ್ನ ನೀಡಲಾಗಿದೆ.