ಆಟೋಗೆ ಲಾರಿ ಡಿಕ್ಕಿ ಸ್ಥಳದಲ್ಲೇ ಇಬ್ಬರ ದುರ್ಮರಣ.!

ಹುಬ್ಬಳ್ಳಿ: ಲಾರಿ ಹಾಗೂ ಆಟೋ ಮದ್ಯೆ ಡಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ, ಹುಬ್ಬಳ್ಳಿಯ ಹೊರಹೊಲಯದ ಗಬ್ಬೂರು ಬೈಪಾಸ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ವರೂರಿಗೆ ಹೊರಟಿದ್ದ ಆಟೋಗೆ, ಎದುರಿನಿಂದ ಬಂದ ಲಾರಿಯಿಂದ ಡಿಕ್ಕಿಯಾಗಿದೆ. ಹೀಗಾಗಿ, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಆದ್ರೆ, ಸಾವಿಗೀಡಾದ ವ್ಯಕ್ತಿಗಳ ಗುರುತು ಇನ್ನು ಪತ್ತೆಯಾಗಿಲ್ಲ. ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸ್ರು ಭೇಟಿ ನೀಡಿ ಪರಿಶೀಲಿಸಿದ್ದಾರೆ.