ಮುಂಡಗೋಡ: ಮಾನಸಿಕ ಖಿನ್ನತೆಗೆ ಒಳಗಾದ ಯುವಕನೊಬ್ಬ ತಾಯಿಯ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಡೆದಿದೆ.
ಅಮಿತ್ ಬಸವರಾಜ್ ಲೋಹಾರ್ (20) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಾಯಿಯ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.