ಅಂಕೋಲಾ: ಇಲ್ಲಿನ ತಾಲೂಕು ಕಚೇರಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು, ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಛರೆನ್ಸ್ ನಡೆಸಿದರು.
ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ ಪ್ರವಾಹದ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ್ರು. ಈ ವೇಳೆ ಸಿಎಂ ಗೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು.