ಬೆಂಗಳೂರು: ದೇಶಾದ್ಯಂತ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್ ಭೀತಿ ಎದುರಾಗಿದೆ.
ಕೇರಳದಲ್ಲಿ ಬುಧವಾರ ಒಂದೇ ದಿನ 22,129 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಕೋವಿಡ್ ಸಂಖ್ಯೆ ರಾಜ್ಯದಲ್ಲಿ ಏಕಾಏಕಿ ಏರಿಕೆಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ 6 ಸದಸ್ಯರ ತಂಡವನ್ನು ರವಾನಿಸಿದೆ.
ಮಹಾರಾಷ್ಟ್ರದಲ್ಲೂ ಪ್ರತಿದಿನ ಆರು ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದುವಾರದಿಂದ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಪ್ರತಿದಿನ 300-400 ಪ್ರಕರಣ ಪತ್ತೆಯಾಗುತ್ತಿರುವುದು ಆತಂಕಕಾರಿಯಾಗಿದೆ. ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳನ್ನೂ ಹೆಚ್ಚಿಸಲಾಗಿದೆ ನಗರದಲ್ಲಿ ಸೋಂಕು ಇನ್ನಷ್ಟು ಹರಡದಂತೆ ಕಟ್ಟುನಿಟ್ಟುನ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ