ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!

ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಇಮ್ರಾನ್

ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಖಡಕ್ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದಾರೆ.

ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ, ಮಹ್ಮದ್ ಇರ್ಫಾನ್ ತಿಮ್ಮಾಪುರ, ಶೇಖ್ ಅಹ್ಮದ್ ಅಶ್ಪಕ್ ಬಂಧಿತ ಆರೋಪಿಗಳು.
ಇನ್ನು, ಬಂಧಿತರಿಂದ 20 ಸಾವಿರ ಮೌಲ್ಯದ 628 ಗ್ರಾಂ ಗಾಂಜಾ ಹಾಗೂ 350 ರೂ. ನಗದು ಜಪ್ತಿ ಮಾಡಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!