ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಕೆಲವು ಬಡವರಿಗೆ ಸೂರು ಕಲ್ಪಿಸಿಕೊಳ್ಳಲು ಸರ್ಕಾರ ಗ್ರಾಮದ ಸರ್ವೆ ನಂಬರ್-51ರಲ್ಲಿ ಹಂಚಿದ್ದ 16 ನಿವೇಶನಗಳನ್ನು ಪಕ್ಕದ ಜಮೀನಿನ ಸರ್ವೆ ನಂಬರ್ 50 ಮತ್ತು 52 ರ ಮಾಲೀಕರು, ಅತಿಕ್ರಮಣ ಮಾಡಿಕೊಂಡಿದ್ದಾರೆ ಅಂತಾ ಅಲ್ಲಿನ ನಿವಾಸಿಗಳು ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳಕ್ಕೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅತಿಕ್ರಮಣ ಮಾಡಿಕೊಂಡಿದ್ದಾರೆ ಎನ್ನಾಲಾದ ಜಮೀನಿನ ಅಳತೆ ಮಾಡಿ, ಅಲ್ಲಿನ ನಿವಾಸಿಗಳಿಗೆ ನ್ಯಾಯ ಒದಗಿಸಿ ಕೊಡುವ ಕ್ರಮಕೈಗೊಂಡಿದ್ದಾರೆ. ಅತಿಕ್ರಮಣ ತೆರವು ಗೊಳಿಸಲು ಕ್ರಮ ಕೈಗೊಂಡಿರೋ ಅಧಿಕಾರಿಗಳಿಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ಸಾಥ್ ನೀಡಿದ್ರು..