ಯಲ್ಲಾಪುರ: ಶಾಸಕ ಶಿವರಾಮ್ ಹೆಬ್ಬಾರ್ ಸಂಪುಟ ಸೇರ್ಪಡೆಗೊಳ್ಳೋದು ಬಹುತೇಕ ಖಚಿತವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರ್ಪಡೆಗೆ ರೆಡಿಯಾಗಿರಿ ಅಂತಾ ಈಗಾಗಲೇ ಶಿವರಾಮ್ ಹೆಬ್ಬಾರ್ ಗೆ ಕರೆ ಮಾಡಿದ್ದಾರೆ ಅನ್ನೋ ಖಚಿತ ಮಾಹಿತಿ ಲಭ್ಯವಾಗಿದೆ.
ಸದ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿರೋ ಹೆಬ್ಬಾರ್ ಇನ್ನೇನು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ರೆಡಿಯಾಗ್ತಿದ್ದಾರೆ.
ಕಾರ್ಮಿಕ ಸಚಿವರಾಗಿ ಯಶಸ್ವಿ ಕಾರ್ಯ ನಿರ್ವಹಿಸಿದ್ದ ಹೆಬ್ಬಾರ್ ರಿಗೆ, ವಲಸಿಗರ ಕೋಟಾದಲ್ಲಿ ಮತ್ತೊಮ್ಮೆ ಸಚಿವ ಸ್ಥಾನ ಪಡೆಯೊ ಅದೃಷ್ಟ ಒಲಿದಿದೆ.