ಕಾರವಾರ; ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ. ಹೀಗಾಗಿ, ಜಿಲ್ಲಾಡಳಿತದಿಂದ ನೂತನ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲಾಧ್ಯಂತ ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಏನದು ಮಾರ್ಗಸೂಚಿ..?
ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿರೋ ಹಿನ್ನೆಲೆಯಲ್ಲಿ ಜಿಲ್ಲಾಧ್ಯಂತ ಇನ್ನು ಮುಂದೆ ದೇವಾಲಯಗಳಲ್ಲಿ ಸೇವೆಗೆ ಅವಕಾಶವಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮದುವೆಗೆ 50 ಜನರಷ್ಟೇ..!
ಇನ್ನು, ಮದುವೆಗಳಿಗೆ ಕೇವಲ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಮದುವೆಗಳಿಗೆ ಆಯಾ ತಾಲೂಕಿನ ತಹಸೀಲ್ದಾರರ ಪೂರ್ವ ಅನುಮತಿ ಕಡ್ಡಾಯವಾಗಿರುತ್ತದೆ. ಅಲ್ದೆ, ಮದುವೆಗೆ ಸೇರಿದವರ ಫೋನ್ ನಂಬರ್ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ. ಮದುವೆಗೆ ಬಂದವರು ಉತ್ತರ ಕನ್ನಡ ಜಿಲ್ಲೆಯವರಾಗಿದ್ದಲ್ಲಿ 2 ದಿನಗಳೊಳಗಾಗಿ ಕೋವಿಡ್ ಟೆಸ್ಟ್ ಕಡ್ಡಾಯ.
ಪ್ರವಾಸಿ ತಾಣಗಳ ಮೇಲೆ ಕಣ್ಣು..!
ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಬೀಚ್ ಗಳಲ್ಲಿ 2 ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಕಡ್ಡಾಯವಾಗಿ ಕೋವಿಡ್ ನಿಯಮ ಪಾಲನೆಗೆ ಆದೇಶ ನೀಡಲಾಗಿದ್ದು, ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ಆದೇಶ ಹೊರಡಿಸಿದ್ದಾರೆ.