ಶಿರಸಿ: ಇಂದು ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ.

ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಸಿದ್ದಾಪುರದ ಪ್ರಶಾಂತಿ ವಿದ್ಯಾನಿಕೇತನದಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಹೇಮಾ ಉಮೇಶ ಹೆಗಡೆ ಹಾಗೂ ಸಿದ್ದಾಪುರದ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಎಸ್.ಎನ್.ಸುನೈ ಮತ್ತು ರೇಷ್ಮಾ ಹೆಗಡೆ 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

ಕಳೆದ ವರ್ಷ ಒಬ್ಬ ವಿದ್ಯಾರ್ಥಿನಿ 625 ಅಂಕ ಗಳಿಸಿ ಸಾಧನೆ ಮಾಡಿದ್ದಳು. ಆದರೆ ಈ ಬಾರಿ ಮೂವರು ವಿದ್ಯಾರ್ಥಿಗಳು 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರ ಸಾಧನೆಗೆ ಪಾಲಕರು ಹಾಗೂ ಶೈಕ್ಷಣಿಕ ಸಂಸ್ಥೆಯವರು ಸಂತೋಷ ವ್ಯಕ್ತಪಡಿಸಿದ್ದಾರೆ.

error: Content is protected !!