ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು..!

ಹಾನಗಲ್: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲೆ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ.

ಚೇತನ್ ಈಳಗೇರ್ (32) ಹಾಗೂ ಸುರೇಶ್ ಚಕ್ರಸಾಲಿ (33) ಮೃತ ಬೈಕ್ ಸವಾರರು. ಮೃತರಿಬ್ಬರೂ ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ನಿವಾಸಿಗಳು ಎನ್ನಲಾಗಿದೆ. ಹಾನಗಲ್ ನಿಂದ ಸ್ವಗ್ರಾಮ ಬೆಳೆಗಾಲಪೇಟೆ ಗೆ ಹೋಗುವಾಗ ದುರಂತ ನಡೆದಿದೆ. ಅಪಘಾತ ತೀವ್ರತೆಗೆ ದೇಹಗಳು ಚಿದ್ರಗೊಂಡಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲೆ ಸಾವು ಕಂಡಿದ್ದಾರೆ.

ಸ್ಥಳಕ್ಕೆ ಹಾನಗಲ್ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾನಗಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!