ಕಲಘಟಗಿ: ಕೋವಿಡ್ ಆತಂಕದ ನಡುವೆಯೇ ಕಲಘಟಗಿಯಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ 2 ಕಿಮೀ ಉದ್ದದ 9 ಅಡಿ ಅಗಲ ಇರುವ ರಾಷ್ಟ್ರಧ್ವಜದ ಮೆರವಣಿಗೆ ನಡೆಯಿತು.
ಮೆರವಣಿಗೆ ವೇಳೆ ಸಾವಿರಾರು ಜನರಿಂದ ರಾಷ್ಟ್ರಭಕ್ತಿಯ ಘೋಷಣೆಗಳು ಮೊಳಗಿದವು. ದೇಶಭಕ್ತಿಯ ಗೀತೆಗಳ ಮೂಲಕ, ಘೋಷಣೆ ಗಳ ಮೂಲಕ ವಿಶೇಷ ರಾಷ್ಟ್ರಧ್ವಜದ ಮೆರವಣಿಗೆ ನಡೆಸಲಾಯಿತು.