ಕುಮಟಾ: ಸಮುದ್ರದಲ್ಲಿ ಮುಳುಗಿ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳ ಸಾವು ಕಂಡ ಘಟನೆ ತಾಲೂಕಿನ ಬಾಡ ಬೀಚ್ ನಲ್ಲಿ ನಡೆದಿದೆ.
ದಾವಣಗೇರೆ ಮೂಲದ ಮೇಘ ಎಂ(24) ಹಾಗೂ ರೇಣುಕಾ ಪ್ರಸಾದ್ (24) ಮೃತ ವಿದ್ಯಾರ್ಥಿಗಳು. ಇಂಜಿನಿಯರಿಂಗ್ ವಿದ್ಯಾಭ್ಯಾಸ ಈ ವರ್ಷ ಮುಗಿದಿತ್ತು. ಹೀಗಾಗಿ, ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಾಗ ದುರ್ಘಟನೆ ನಡೆದಿದೆ.
ಮೇಘಾ ಮೃತದೇಹ ಸಿಕ್ಕಿದ್ದು, ರೇಣುಕಾ ಪ್ರಸಾದ್ ದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.