ಮುಂಡಗೋಡಿನಲ್ಲಿ ನೂಲಿ ಚಂದಯ್ಯನವರ ಜಯಂತ್ಯೋತ್ಸವ..!

ಮುಂಡಗೋಡ: ಪಟ್ಟಣದಲ್ಲಿ ಕೊರವ ಸಮಾಜದ ಶಿವಶರಣ ಶ್ರೀ ನೂಲಿ ಚಂದಯ್ಯ ನವರ ಜಯಂತೋತ್ಸವ ಕಾರ್ಯಕ್ರಮವನ್ನು ಬಂಕಾಪುರ ರಸ್ತೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಮಾಜದ ಗುರುಹಿರಿಯರ ಹಾಗೂ ಸಮಾಜದ ಬಂಧು ಮಿತ್ರ ಸಹೋದರರ ಆಶ್ರಯದಲ್ಲಿ ಶಿವ ಶರಣರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಮಾಡಲಾಯಿತು.

ಕಾಯಕಯೋಗಿ ನೂಲಿಯ ಚಂದಯ್ಯನವರು ಜನಿಸಿದ ದಿನವಾದ ಇಂದು ರಕ್ಷಾ ಬಂಧನದ ಪ್ರಯುಕ್ತವಾಗಿ ಬಂಧುಗಳಲ್ಲಿ ಶ್ರೀರಕ್ಷೆ ನಮ್ಮೆಲ್ಲರಿಗೂ ರಕ್ಷಣೆ ಆಗಲೆಂದು ರಕ್ಷಾಬಂಧನವನ್ನು ಮಾಡಿಸಿ ಪ್ರಸಾದ ವಿತರಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ವೇಳೆ ತಾಲೂಕಿನ ಸಮಾಜದ ಎಲ್ಲ ಗಣ್ಯ ವ್ಯಕ್ತಿಗಳು ಹಾಗೂ ಸಹೋದರ ಬಂಧುಮಿತ್ರರು ಉಪಸ್ಥಿತರಿದ್ದರು.

error: Content is protected !!