ಮುಂಡಗೋಡ: ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ನಡೆದಿದೆ.
ಸಂಜೀವ್ ಫಕ್ಕೀರಪ್ಪ ಹೊನ್ನಳ್ಳಿ(30) ನೇಣಿಗೆ ಶರಣಾದ ಯುವಕನಾಗಿದ್ದಾನೆ. ರಾತ್ರಿ 8 ಗಂಟೆಯ ಹೊತ್ತಿಗೆ ಮನೆಯಲ್ಲೇ ಎಲ್ಲರೊಂದಿಗೆ ಇದ್ದ ಮೃತ ಯುವಕ, ಮನೆಯವರೇಲ್ಲರೂ ಹೊರಗಡೆ ಕುಳಿತಿದ್ದಾಗ, ಒಳಗೆ ಹೋಗಿ ಮನೆಯ ಜಂತಿಗೆ ನೇಣು ಬಿಗಿದುಕೊಂಡಿದ್ದಾನೆ.
ಪೋಷಕರು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಅಷ್ಟೊತ್ತಿಗಾಗಲೇ ಯುವಕ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.