ಶಿರಸಿ: ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಹವಣಿಸುತ್ತಿದ್ದ ಆರೋಪಿಗಳನ್ನ ಬಂಧಿಸಿದ ಘಟನೆ ನಡೆದಿದೆ.
ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಮ ಕಾಲೋನಿಯಲ್ಲಿ 1 ಕೆಜಿ 910 ಗ್ರಾಂ ತೂಕದ ಅಂದಾಜು 25ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ಅಕ್ರಮವಾಗಿ ಸೊರಬದಿಂದ ಸಾಗಾಟ ಮಾಡಿಕೊಂಡು ಶಿರಸಿಯಲ್ಲಿ ಮಾರಾಟ ಮಾಡುವುದಕ್ಕಾಗಿ, ಬಂದವರನ್ನು ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿದ್ದು, ಆರೋಪಿಗಳನ್ನ ಬಂಧಿಸಲಾಗಿದೆ.
ಮಂಜುನಾಥ ನಾಯ್ಕ(31) ಹಾಗೂ ವೀರಭದ್ರಪ್ಪ ತಂದೆ ಕರಿಯಪ್ಪ ಈಡಿಗ(42) ಬಂಧಿತ ಆರೋಪಿಗಳಾಗಿದ್ದು, ಇಬ್ಬರೂ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕೊಳಗ ದೇವನಹಳ್ಳಿಯವರು. 1 ನೇ ಆರೋಪಿ ಮಂಜುನಾಥನ ವಿರುದ್ಧ ಈ ಹಿಂದೆ ಸುಲಿಗೆ ಪ್ರಕರಣವು ಬನವಾಸಿ ಠಾಣೆಯಲ್ಲಿ ದಾಖಲಾಗಿದೆ. ಆರೋಪಿತರ ವಿರುದ್ಧ ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..