ಶಿರಸಿ: ಕಟ್ಟಡ ನಿರ್ಮಿಸಿದ್ದ ಗುತ್ತಿಗೆದಾರನಿಗೆ ಬಿಲ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಶಿರಸಿ ನಗರದ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ನಡೆದಿದೆ.
ಶಿರಸಿ ಜಿಲ್ಲಾ ಪಂಚಾಯತಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯದುನಂದನ್ ಹಾಗೂ ಗುತ್ತಿಗೆ ಆಧಾರದ ಮೇಲೆ ಕೆಲಸದಲ್ಲಿದ್ದ ಸುಬ್ರಹ್ಮಣ್ಯ ಬಂಧಿತ ಆರೋಪಿಗಳು. ಇವರನ್ನು ಶಿವಮೊಗ್ಗದ ಸುನೀಲ್ ಎಂಬ ಗುತ್ತಿಗೆದಾರನಿಂದ 12 ಸಾವಿರ ರು. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.
ಗುತ್ತಿಗೆದಾರನಿಗೆ 4 ಲಕ್ಷ ರೂ.ಗಳ ಬಿಲ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆದಿದೆ. ಘಟನೆಯಲ್ಲಿ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಭಿಯಂತರ ಕೈವಾಡ ಇರಬಹುದು ಎಂಬ ಶಂಕೆಯನ್ನು ಎಸಿಬಿ ವ್ಯಕ್ತಪಡಿಸಿದ್ದು, ಅವರನ್ನೂ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಡಿಎಸ್ಪಿ ವಿರೇಶ ನೇತೃತ್ವದಲ್ಲಿ ದಾಳಿ ನಡೆದಿದೆ.