ಹುಬ್ಬಳ್ಳಿಯ ಸೈಕ್ಲಿಸ್ಟ್ ಒಬ್ಬರು ಸೈಕ್ಲಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿಗ್ಗಾಂವ ಸಮೀಪ ನಡೆದಿದೆ.
ಬಸವಗೌಡ ಶಂಕರಗೌಡ ಶಿವಳ್ಳಿ (35) ಮೃತರಾಗಿದ್ದು, ಬಿವ್ಹಿಬಿ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದರು. ಅಲ್ಲದೇ ಹಲವಾರು ವರ್ಷಗಳಿಂದ ಸೈಕ್ಲಿಸ್ಟ್ ಆಗಿದ್ದು, ವಿವಿಧ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದರು. ಇಂದು ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಯೋಜಿಸಿದ್ದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಶಿಗ್ಗಾಂವ ಬಳಿ ಏಕಾಏಕಿ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.

*******************

ಜಾಹೀರಾತು

error: Content is protected !!