ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ನಿಧನರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದು, ಜುಲೈ 18ರಂದು ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದಿದ್ದ ಆಸ್ಕರ್ ಫರ್ನಾಂಡೀಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ವೇಳೆ ಮೆದುಳುಗೆ ಏಟು ಬಿದ್ದರೋದು ಬೆಳಕಿಗೆ ಬಂದಿತ್ತು, ಹೀಗಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಪರ್ನಾಂಡೀಸ್ ವಿಧಿವಶರಾಗಿದ್ದಾರೆ.
1941ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್, 1980ರಲ್ಲಿ ಮೊದಲ ಬಾರಿ ಉಡುಪಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಸ್ಕರ್ ಫರ್ನಾಂಡೀಸ್, ಕೇಂದ್ರ ಸಾರಿಗೆ, ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸೋನಿಯಾ ಗಾಂಧಿ ಕುಟುಂಬದ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು.
ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ರಾಷ್ಟ್ರ ಹಾಗೂ ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.