ಮುಂಡಗೋಡ: ಪಟ್ಟಣದಲ್ಲಿ ಇಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಪುರೋಹಿತರ ಬಳಗದಿಂದ ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇಲ್ಲಿನ ಬಸವಣ್ಣ ದೇವಸ್ಥಾನದಲ್ಲಿ ಸೇರಿದ್ದ ಪುರೋಹಿತರು ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಾರ್ಯಕರ್ತರು ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಮಾಡಿದ್ರು. ವೀರಭದ್ರೇಶ್ವರ ನಾಮಾವಳಿ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳ ಕುರಿತು ಚರ್ಚಿಸಿದ್ರು..