ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಮಂಗಳವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಡುಪಿ ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಆಶಾ ಶೆಟ್ಟಿ (48) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದು ಬಂದಿದೆ.
ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ಕಣ್ಣುಗಳನ್ನು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.