ಉಡುಪಿ: ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತವಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ಘಟನೆ ನಡೆದಿದೆ.
ಟೈಯರ್ ಸ್ಪೋಟಗೊಂಡು ಡಿವೈಡರ್ ಹಾರಿ ನುಗ್ಗಿದ ಅಂಬುಲೆನ್ಸ್, ಇಡಿ ಇಡಿಯಾಗಿ ನದಿಗೆ ಹಾರುವುದರಲ್ಲಿ ಸ್ವಲ್ಪದರಲ್ಲೇ ತಪ್ಪಿದೆ. ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿ ಬಚಾವ್ ಆಗಿದೆ. ಹೀಗಾಗಿ, ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಪಾರಾಗಿದೆ. ಇದ್ರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ.
ಘಟನೆಯಲ್ಲಿ ಆಂಬುಲೆನ್ಸ್ ನಲ್ಲಿ ಮಗುವನ್ನು ಕರೆದೊಯ್ಯುತ್ತಿದ್ದ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕೋಟ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.