ಯಲ್ಲಾಪುರ: ಕಟ್ಟಿಗೆ ತುಂಬಿದ್ದ ಲಾರಿ ಹೆದ್ದಾರಿಯಲ್ಲೇ ಪಲ್ಟಿಯಾಗಿ, ವಾಹನ ದಟ್ಟಣೆ ಹೆಚ್ಚಿದ ಪರಿಣಾಮ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾದ ಘಟನೆ, ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಅಂಕೋಲಾದಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಲಾರಿ, ಘಟ್ಟದಲ್ಲಿ ತೆರಳುತ್ತಿದ್ದ ವೇಳೆ ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹಾಗೆ ಪಲ್ಟಿಯಾದ ಲಾರಿ ಎದುರಲ್ಲೇ ಮತ್ತೊಂದು ಲಾರಿ, ಕೆಟ್ಟು ನಿಂತಿದೆ‌. ಪರಿಣಾಮ,
ಅರಬೈಲ್ ಘಟ್ಟದಲ್ಲಿ ಸರಕು ಸಾಗಣೆ ಲಾರಿಗಳು ಸಾಲುಗಟ್ಟಿ ನಿಂತಿವೆ.

ಮಳೆಯ ಅಬ್ಬರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಅಂಕೋಲಾ ಯಲ್ಲಾಪುರ ಮಾರ್ಗವಾಗಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ.

error: Content is protected !!