ಮುಂಡಗೋಡ: ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸಲು ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪಂಚಮಸಾಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ರು.

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಂಘದ ಕಾರ್ಯಕರ್ತರು, 2ಎ ಮೀಸಲಾತಿಗೆ ಸೇರಿಸುವಂತೆ ಜಯಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆಸಿದ್ದೆವು, ಆ ವೇಳೆ, ಸಿಎಂ ಆಗಿದ್ದ ಯಡಿಯೂರಪ್ಪ ಅವರು 2ಎ ಮೀಸಲಾತಿ ನೀಡಲು ಆರು ತಿಂಗಳು ಸಮಯ ಕೇಳಿದ್ದರು, ಆದ್ರೆ ಈಗ ಯಡಿಯೂರಪ್ಪರ ಸಮಯದ ಅವಧಿ ಮುಗಿದಿದೆ.

ಈಗ ನೂತನವಾಗಿ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ‌. ಹೀಗಾಗಿ, ಕೂಡಲೇ ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸುವಂತೆ ಸಂಘದ ಮುಖಂಡರು ಹಾಗೂ ಸಮಾಜದ ಬಾಂಧವರು ಸರ್ಕಾರಕ್ಕೆ ಒತ್ತಾಯಿಸಿದ್ರು. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಅಂತಾ ಇದೇ ವೇಳೆ ಎಚ್ಚರಿಸಿದ್ರು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕುಟ್ರಿ, ರಾಮಣ್ಣ ಕುನ್ನೂರ್, ಗುಡ್ಡಪ್ಪ ಕಾತೂರು, ಶಿವಾನಂದ್ ನಿಡಗುಂದಿ, ಶೇಕಪ್ಪ ಹೊನ್ನಳ್ಳಿ, ಚಂದ್ರು ಹಡಪದ, ವಿನೋದ್ ಬಿಸನಳ್ಳಿ, ಮಲ್ಲಿಕಾರ್ಜುನ್ ಗೌಳಿ, ಸುರೇಶ್ ಗೌಳಿ, ನಟರಾಜ್ ಕಾತೂರು, ಮಲ್ಲೇಶಪ್ಪ ಗೊಟಗೋಡಿ, ರುದ್ರಗೌಡ ಚನ್ನಪ್ಪನವರ್ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ರು.

error: Content is protected !!