ಮುಂಡಗೋಡ: ಪಟ್ಟಣದಲ್ಲಿ ಸೆಪ್ಟೆಂಬರ್ 3 ರ ರಾತ್ರಿ ನಡೆದಿದ್ದ , ಪೋಟೊ ಸ್ಟುಡಿಯೋ ಹಾಗೂ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣದ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಹಾಳಬಾವಿಕೇರಿಯ ಇಮಾಮಸಾಬ ದಾವಲಸಾಬ ಅಲ್ಲಿಬಾಯಿ (21) ಎಂಬುವವನೇ ಕಳ್ಳತನದ ಆರೋಪಿಯಾಗಿದ್ದಾನೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶಿವಪ್ರಕಾಶ್ ದೇವರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ಬದರಿನಾಥ, ಡಿವೈಎಸ್ಪಿ ರವಿ ನಾಯ್ಕ ರವರ ಮಾರ್ಗದರ್ಶನದಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪಿಐ ಸಿದ್ಧಪ್ಪ ಎಸ್. ಸಿಮಾನಿ ರವರ ನೇತೃತ್ವದಲ್ಲಿ ಪಿಎಸ್‌ಐ ಬಸವರಾಜ ಮಬನೂರ, ಪಿ.ಎಸ್.ಐ ನಿಂಗಪ್ಪ ಜಕ್ಕಣ್ಣವರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಧರ್ಮರಾಜ, ಸುರೇಶ್ ವಿ, ವಿನೋದಕುಮಾರ, ಅರುಣಕುಮಾರ ಬಿ, ಅಣ್ಣಪ್ಪ, ಶರತಕುಮಾರ, ಬಸವರಾಜ ಎಲ್, ಶರಣಪ್ಪ ಸೇರಿ ಹಲವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ರು.
ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶ್ರಮಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯವರ ಈ ಕಾರ್ಯವನ್ನು ಉತ್ತರ ಕನ್ನಡ ಎಸ್ಪಿ ಪ್ರಕಾಶ್ ದೇವರಾಜು ಶ್ಲಾಘಿಸಿದ್ದಾರೆ.