ಮುಂಡಗೋಡ: ಪಂಚಾಯತ ಅಭಿವೃದ್ಧಿ ಅಧಿಕಾರಿ ವೆಂಕಪ್ಪ ಲಮಾಣಿಯವರ ಮೇಲೆ ದೈಹಿಕ ಹಲ್ಲೆ ನಡೆಸಿದವರ ಮೇಲೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ ಗ್ರಾಮ ಪಂಚಾಯತಿ ಪಿಡಿಓಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಮನವಿ ಅರ್ಪಿಸಿದ್ರು.
ನಂದಿಕಟ್ಟಾ ಗ್ರಾಮ ಪಂಚಾಯತ ಪಿಡಿಓ ವೆಂಕಪ್ಪ ಕೆ.ಲಮಾಣಿ ರವರ ಮೇಲೆ ದೈಹಿಕ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗೌಸುಸಾಬ ಮೌಲಾಲಿ ಯಳ್ಳುರ ಎಂಬುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ಅಪರಾಧಿಗೆ ತಕ್ಕೆ ಶಿಕ್ಷೆಯಾಗಬೇಕು ಅಂತಾ ನೌಕರರು ಆಗ್ರಹಿಸಿದ್ದಾರೆ.
ಇಂದಿನ ದಿನಗಳಲ್ಲಿ ಪ್ರಾಮಾಣಿಕವಾಗಿ ಸರ್ಕಾರದ ವಿವಿದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸ್ಥಳೀಯ ಮಟ್ಟದಲ್ಲಿ ಇದ್ದುಕೊಂಡು ಗ್ರಾಮದ ಕಟ್ಟ ಕಡೆಯ ವ್ಯಕ್ತಿಗಳಿಗೂ ಕೂಡ ಜನರ ಮನೆ ಮನೆಗಳಿಗೆ ತಲುಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತ ಬರುತ್ತಿರುವ ಗ್ರಾಮ ಪಂಚಾಯತ ನೌಕರ ವೃಂದವಾದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಕಾರ್ಯದರ್ಶಿಗಳು, ಎಸ್.ಡಿ.ಎ ಗಳು, ಬಿಲ್ ಕಲೆಕ್ಟರ್, ಕ್ಲರ್ಕ, ಕಂಪ್ಯೂಟರ್ ಆಪರೇಟರ್, ಸಿಪಾಯಿ, ವಾಟರಮನ್ ಗಳ ಮೇಲೆ ಈ ರೀತಿಯ ದೈಹಿಕ, ಮಾನಸಿಕ ಹಲ್ಲೆಗಳು ಅವಾಚ್ಯ ಶಬ್ದಗಳಿಂದ ನಿಂದಿಸುವ ಕೆಲಸ ದಿನ ನಿತ್ಯ ನಡೆಯುತ್ತಿವೆ. ಇಂತಹ ಸನ್ನಿವೇಶದಲ್ಲಿ ಗ್ರಾಮ ಪಂಚಾಯತಗಳಲ್ಲಿ ಕೆಲಸ ನಿರ್ವಹಿಸುವ ಪ್ರತಿಯೊಬ್ಬ ನೌಕಕರು ಒತ್ತಡದಲ್ಲಿ ಕೆಲಸ ಮಾಡುವಂತಾಗಿದೆ. ಈ ರೀತಿಯ ದೈಹಿಕ ಮಾನಸಿಕ ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೋಳ್ಳಬೇಕು. ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ ನೌಕಕರು ನೆಮ್ಮದಿಯಿಂದ ಕಛೇರಿಯಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ನಿಡುವಂತಹ ಪರಿಸ್ಥಿತಿ ಉಂಟಾಗಬೇಕು ಅಂತಾ ಆಗ್ರಹಿಸಿದ್ದಾರೆ.