ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಗ್ರಾಮಗಳಲ್ಲಿ ಪಂ.ದೀನ್ ದಯಾಳ್ ಉಪಾಧ್ಯಾಯರ ಜಯಂತಿ ಆಚರಣೆ..!

ಮುಂಡಗೋಡ- ತಾಲೂಕಿನ ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಸೇರಿದಂತೆ ತಾಲೂಕಿನಾದ್ಯಂತ ಇಂದು ಹಲವು ಗ್ರಾಮಗಳಲ್ಲಿ ಜನಸಂಘದ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ 105ನೇ ಜನ್ಮದಿನ ಆಚರಿಸಲಾಯಿತು.

ಬಿಜೆಪಿ ಕಾರ್ಯಕರ್ತರು, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿದರು.

ಹುನಗುಂದ ಗ್ರಾಮದ ಶಕ್ತಿಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ, ಬೂತ್ ಗಳ ಅಧ್ಯಕ್ಷರುಗಳು, ಗ್ರಾಮಗಳ ಪ್ರಮುಖರು, ಬಿಜೆಪಿಯ ಹಿರಿಯರು ಹಾಗೂ ಊರಿನ ಗಣ್ಯರು ಭಾಗವಹಿಸಿದ್ದರು.

error: Content is protected !!