ಮುಂಡಗೋಡ: ಕೃಷಿ ಕಾಯ್ದೆ ತಿದ್ದುಪಡಿ ವಿಧೇಯಕ ವಿರೋಧಿಸಿ ರೈತ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್, ಮುಂಡಗೋಡಿನಲ್ಲಿ ಸಾಂಕೇತಿಕ ಪ್ರತಿಭಟನೆಗಷ್ಟೇ ಸೀಮಿತವಾಗಿತ್ತು. ಬಿಟ್ಟರೆ, ಪಟ್ಟಣದಲ್ಲಿ ಜನಜೀವನ ಎಂದಿನಂತೆ ಇತ್ತು.

ಇಂದು ಬೆಳಗಿನಿಂದಲೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಓಪನ್ ಆಗಿತ್ತು. ವ್ಯಾಪಾರ ವಹಿವಾಟು ಎಂದಿನಂತೆ ಪ್ರಾರಂಭವಾಗಿತ್ತು. ಆಟೋ, ಬಸ್ ಗಳು ಎಂದಿನಂತೆ ರಸ್ತೆಗಿಳಿದಿದ್ದವು. ಆದ್ರೆ, ಇಲ್ಲಿನ ಕೆಲವು ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರಕ್ಕೆ ಕೃಷಿ ಕಾಯ್ದೆ ತಿದ್ದುಪಡಿ ವಿಧೇಯಕ ಹಿಂಪಡೆಯುವಂತೆ ಮನವಿ ಪತ್ರ ನೀಡಿದ್ರು‌. ಕೆಲಹೊತ್ತು, ತಹಶೀಲ್ದಾರ್ ಕಚೇರಿ ಎದುರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು.

ಇನ್ನು, ಇಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೇಚ್ಚರ ವಹಿಸಿದ್ರು.

error: Content is protected !!