ಮುಂಡಗೋಡ: ಜಿಂಕೆಯೊಂದು ಬೈಕ್ ಗೆ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಅತ್ತಿವೇರಿ ಪಕ್ಷಿಧಾಮದ ಹತ್ತಿರ ನಡೆದಿದೆ.

ಮಾರುತಿ ರಾಮಣ್ಣ ಹುಲಿಹೊಂಡ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರ. ಈತ ಅತ್ತಿವೇರಿ ಪಕ್ಷಿಧಾಮದಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಇಂದು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ, ಏಕಾಏಕಿ ಜಿಂಕೆ ಬೈಕ್ ಮೇಲೆಯೇ ಜಿಗಿದಿದೆ. ಪರಿಣಾಮ, ಬೈಕ್ ಸವಾರ ಮಾರುತಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ.

ತಲೆಗೆ ಹಾಗೂ ಕೈಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಮುಂಡಗೋಡಿನ ತಾಲೂಕಾಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ‌.

error: Content is protected !!