ಭಾರೀ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಜನರ ಸಾವು..!

ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯಲ್ಲಿದ್ದ 7 ಜನರು ಸಾವು ಕಂಡ ಹೃದಯ ವಿದ್ರಾವಕ ಘಟನೆ, ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದೆ.

ಭೀಮಪ್ಪ ಖನಗಾಂವಿ ಎಂಬುವವರಿಗೆ ಸೇರಿದ ಮನೆ ಭಾರೀ ಮಳೆಯಿಂದ ಕುಸಿದು ಬಿದ್ದಿದ್ದು, 7 ವರ್ಷದ ಮಗು ಸೇರಿ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು, ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲು ಅಗ್ನಿಶಾಮಕ ದಳ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ

error: Content is protected !!