ಹಾನಗಲ್ ನಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಅನ್ನೋ ಪ್ರತಿಷ್ಟೆಯ ಜಿದ್ದಿಗೆ ಬಿದ್ದಿದ್ದಾರೆ. ಹೀಗಾಗಿ, ಇಡೀ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರಕ್ಕೆ ಕಾರ್ಯಪಡೆ ರಚಿಸಿದ್ದಾರೆ.
ಅದ್ರಂತೆ, ಪಕ್ಕದ ಮುಂಡಗೋಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾನಗಲ್ ಉಪಚುನಾವಣೆಯ ಅಖಾಡಕ್ಕೆ ಇಳಿದು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ತಾಲೂಕಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು, ಮುಖಂಡರು ಹಾನಗಲ್ ಕ್ಷೇತ್ರದ ಹಳ್ಳಿ, ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ.
ಮುಂಡಗೋಡ ಬಿಜೆಪಿಯ ಯುವ ಮೋರ್ಚಾ ತಾಲೂಕಾ ಘಟಕದ ಅಧ್ಯಕ್ಷ ಗಣೇಶ್ ಶಿರಾಲಿ, ಸಂಜೀವ ಪೀಸೆ, ಮಂಜುನಾಥ್ ಹಿರೇಮಠ, ಶಿವಯೋಗಿ ಕೂಡಲಮಠ ಸೇರಿದಂತೆ ಹಲವು ಯುವ ಮುಖಂಡರು ಪ್ರಚಾರ ಕಾರ್ಯದಲ್ಲಿ ತೊಡಗಿದ್ರು.