ಶಿರಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೋಟಿ ಕೋಟಿ ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್( ತಿಮಿಂಗಿಲ ವಾಂತಿ) ವಶಕ್ಕೆ ಪಡೆದಿದ್ದಾರೆ. ಜೊತೆಗೆ ಇಬ್ಬರನ್ನು ಬಂದಿಸಿದ್ದಾರೆ.
ಬಂಧಿತರಿಂದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ 5 ಕೆಜಿ, ನಿಷೇಧಿತ ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ ) ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಇದು ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಮೊಟ್ಟ ಮೊದಲ ಪ್ರಕರಣವಾಗಿದೆ.