ಕುಮಟಾ- ಕಾಲೇಜು ಆವರಣದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆಯಾಗಿದೆ. ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜ್ ಹಿಂಬದಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಸಂಜೆ ವಾಯುವಿಹಾರಕ್ಕೆ ತೆರಳಿದ್ದವರ ಕಣ್ಣಿಗೆ ಬಿದ್ದಿದ್ದ ಬಾಂಬ್ ಮಾದರಿ ವಸ್ತು ಗಮನಿಸಿದ ಸ್ತಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕುಮಟಾ ಪೊಲೀಸ್ ದೌಡಾಯಿಸಿ, ಪರಿಶೀಲನೆ ಕೈಗೊಂಡಿದ್ದಾರೆ.

ಕಾಲೇಜು ಆವರಣದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಶ್ವಾನದಳ ಬೀಡು ಬಿಟ್ಟಿದೆ. ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ತಂಡ ಆಗಮಿಸೋ ಸಾಧ್ಯತೆಯಿದೆ‌. ಬಾಂಬ್ ಮಾದರಿಯ ವಸ್ತು ಸಿಕ್ಕಿದ್ದು ಕುಮಟಾ ವ್ಯಾಪ್ತಿಯಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ.

error: Content is protected !!