ಬೆಂಗಳೂರು: ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಅಂತ್ಯಕ್ರಿಯೆ ನಾಳೆ ನಡೆಸಲು ತೀರ್ಮಾನಿಸಲಾಗಿದೆ. ಹಾಗಂತ, ಪುನೀತ್ ಸಹೋದರ ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದ್ದಾರೆ.
ಏರ್ಪೊಟ್ ನಿಂದ ನೇರವಾಗಿ ಕಂಠೀರವ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳುವ ಮಾಹಿತಿ ಸಿಕ್ಕಿದ್ದು. ಪುನೀತ್ ಪುತ್ರಿ ಆಗಮಿಸೋದು ಸಂಜೆಯಾಗುವ ಕಾರಣಕ್ಕೆ ನಾಳೆ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಿಂದು ಸಂಪ್ರದಾಯದ ಪ್ರಕಾರ ಅಂತ್ತಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.