ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ಮಠದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿ, 14 ಜನರ ಮೇಲೆ ಕೇಸು ದಾಖಲಿಸಿದ ಘಟನೆ ನಡೆದಿದೆ. ಇನ್ನು ದಾಳಿ ವೇಳೆ ಅಂದರ್ ಬಾಹರ್ ಆಟದಲ್ಲಿ ಬಳಸಿದ್ದ ನಗದು 3,500 ರೂಪಾಯಿ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 4 ಜನ ಆರೋಪಿಗಳು ದಾಳಿಯ ಕಾಲಕ್ಕೆ ಸೆರೆ ಸಿಕ್ಕಿದ್ದು ಇನ್ನುಳಿದವರು ಪರಾರಿಯಾಗಿದ್ದಾರೆ. ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ದಾಳಿ ನಡೆದಿದ್ದು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಡಗೋಡಿನ ಕಂಬಾರಗಟ್ಟಿ ಪ್ಲಾಟ್ ಬಳಿ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ..!

ಮುಂಡಗೋಡ: ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಐವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರಮೇಶ ಹನುಮಂತಪ್ಪ ಸುಣಗಾರ, ಮಹೇಶ ಪರಶುರಾಮ ಸೋರಗಿ, ಗಂಗಾಧರ ರಾಮಚಂದ್ರ ಕಲಾಲ್, ರಾಮು ಲಕ್ಷ್ಮಣ ಕೊಪ್ಪರಿಸಿಕೊಪ್ಪ, ಯುವರಾಜ ಪರಶುರಾಮ ಪಾಟೀಲ್ ಎಂಬುವವರ ಮೇಲೆ ಕೇಸ್ ದಾಖಲಾಗಿದೆ. ಅಲ್ಲದೇ ಇಸ್ಪೀಟು ಆಟಕ್ಕೆ ಬಳಸಿದ್ದ ನಗದು 1500 ರೂಪಾಯಿ ಸೇರಿದಂತೆ ಇಸ್ಪೀಟು ಆಟದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಮುಂಡಗೋಡ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

error: Content is protected !!