ಮುಂಡಗೋಡ: ತಾಲೂಕಿನ ಅಗಡಿ ಬಳಿ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ, ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಆದ್ರೆ, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.
ಹಳಿಯಾಳ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್, ರಸ್ತೆಗಳ ಗುಂಡಿಗಳಲ್ಲಿ ನಿಯಂತ್ರಣ ತಪ್ಪಿ ಬಿದ್ದಿತ್ತು ಎನ್ನಲಾಗಿದೆ. ಹೀಗಾಗಿ, ರಸ್ತೆಗಳ ಅವ್ಯವಸ್ಥೆಗೆ ಜನರು ಹಿಡಿಶಾಪ ಹಾಕುವಂತಾಗಿದೆ. ಅಂದಹಾಗೆ, ಈ ರಸ್ತೆಯಲ್ಲಿ ನಿತ್ಯವೂ ನೂರಾರು ವಾಹನಗಳು ಕಬ್ಬು ಸಾಗಿಸುತ್ತಿವೆ. ಈ ವೇಳೆ ರಸ್ತೆಗಳ ಗುಂಡಿಗಳಿಂದ ಇನ್ನಿಲ್ಲದ ಕಿರಿಕಿರಿಯಾಗುತ್ತಿದೆ. ಸಂಬಂದಪಟ್ಟ ಇಲಾಖೆ ಈ ಕಡೆ ಸ್ವಲ್ಪ ಗಮನ ಹರಿಸಲಿ ಅನ್ನೋದು ಗ್ರಾಮಸ್ಥರ ಆಗ್ರಹವಾಗಿದೆ.