ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ಗ್ರಾಮದೇವಿ ದೇವಸ್ಥಾನದಲ್ಲಿ ಕಾರ್ತಿಕ ಅಮವಾಸ್ಯೆಯ ನಿಮಿತ್ತ ಕಾರ್ತಿಕೋತ್ಸವ ಆಚರಿಸಲಾಯಿತು.
ವಿವಿದ ಚಿತ್ರಗಳ ರೂಪದಲ್ಲಿ ದೀಪ ಬೆಳಗಿಸಿ ಭಕ್ತರು ಸಂಭ್ರಮಿಸಿದ್ರು. ದೇವಸ್ಥಾನದ ಅಂಗಳದಲ್ಲಿ ರಂಗೋಲಿ ಬಿಡಿಸಿ ಅದರ ಪ್ರಕಾರವೇ ದೀಪಗಳನ್ನು ಬೆಳಗಿಸಿದ್ರು. ಕಾರ್ತಿಕ ದೀಪ ಬೆಳಗಿಸೋ ಮೊದಲು ದೇವಿಗೆ ವಿಶೇಷ ಪೂಜೆ ಮಾಡಲಾಯಿತು.. ಇನ್ನು ಕಾರ್ತಿಕೋತ್ಸವದ ನಂತರ ಅನ್ನ ಸಂತರ್ಪಣೆ ನೆರವೇರಿಸಲಾಯಿತು.