ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಮತ್ತೆ ಕೊರೊನಾ ಎಂಟ್ರಿ ಕೊಟ್ಟಿದೆ. ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಹೋಗುತ್ತಿದ್ದ ಹುನಗುಂದದ ಮಹಿಳೆಯೊಬ್ಬಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಅಂತಾ ಗ್ರಾಮ ಪಂಚಾಯತಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಇಲ್ಲಿನ ಮಹಿಳೆ ಪ್ರತಿನಿತ್ಯ ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಅಂತಾ ಅಡುಗೆ ಮಾಡಲು ಹೋಗುತ್ತಿದ್ದಳು ಎನ್ನಲಾಗಿದೆ. ಹೀಗಾಗಿ, ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಟೆಸ್ಟ್ ಮಾಡಿದ್ದರು. ನಂತರ ಆ ವರದಿಯಲ್ಲಿ ಮಹಿಳೆಗೆ ಕೊರೋನಾ ದೃಢ ಪಟ್ಟಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಸಿಬ್ಬಂದಿಗಳು ಸೋಂಕಿತೆಯ ಮನೆಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.