ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗಳಲ್ಲಿ ಕೆಲಸಕ್ಕೆ ಹೋಗುವ ಸುತ್ತ ಮುತ್ತಲ ಹಳ್ಳಿಗಳ ಕೂಲಿ ಕಾರ್ಮಿಕರಿಗೆ ಆತಂಕ ಶುರುವಾಗಿದೆ.
ರವಿವಾರ ತಾಲೂಕಿನ ಹುನಗುಂದ ಗ್ರಾಮದ ಮಹಿಳೆಯೋರ್ವಳಿಗೆ ಕೊರೋನಾ ಪಾಸಿಟಿವ್ ದೃಢ ಪಟ್ಟಿದ್ದು ಮತ್ತಷ್ಟು ಆತಂಕಕ್ಕೇ ಕಾರಣವಾಗಿದೆ. ನಿತ್ಯವೂ ಇಲ್ಲಿನ ಟಿಬೇಟಿಯನ್ ಕಾಲೋನಿಗಳಿಗೆ ಕೆಲಸಕ್ಕೆ ತೆರಳುವ ನೂರಾರು ಕಾರ್ಮಿಕರು ತಕ್ಷಣವೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆಯಾ ಗ್ರಾಮಗಳ ಗ್ರಾಮ ಪಂಚಾಯತಿಗಳು ಸೂಚನೆ ನೀಡಿವೆ.