ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭೀಕರ ಸರಣಿ ಅಪಘಾತಕ್ಕೆ ಸ್ಥಳದಲ್ಲೇ ನಾಲ್ವರ ದುರ್ಮರಣವಾಗಿದೆ. 10 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.

ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಘಟನೆ ನಡೆದಿದ್ದು. ಈರುಳ್ಳಿ ತುಂಬಿದ ಲಾರಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿದೆ. ಬಳಿಕ ಚಲಿಸುತ್ತಿದ್ದ ಕಾರಿಗೆ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿದೆ.

ಇನ್ನು, ಅಪಘಾತದ ರಭಸಕ್ಕೆ 2 ಲಾರಿಗಳು
ಪಲ್ಟಿ ಹೊಡೆದಿವೆ. ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಈರುಳ್ಳಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಮೃತ ನಾಲ್ವರ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರಿಂದ ಕ್ರೇನ್ ಮೂಲಕ ಲಾರಿಗಳ ತೆರವು ಕಾರ್ಯ ನಡೆದಿದೆ. ಸ್ಥಳಕ್ಕೆ ಹಿರಿಯೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಎಸ್ಪಿ ಜಿ.ರಾಧಿಕಾ ಭೇಟಿ ನೀಡಿದ್ದಾರೆ.

error: Content is protected !!