ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಗೆಲುವಿನ ಸಂಭ್ರಮ..!

ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಗರು ಪಟಾಕಿ ಸಿಡಿಸಿ ಸಿಹಿ ತಿನ್ನಿಸಿ ಸಂಭ್ರಮಿಸಿದ್ರು‌. ಬಿಜೆಪಿ ಪರವಾಗಿ ಘೋಷಣೆ ಕೂಗಿದ್ರು. ಕುಣಿದು ಕುಪ್ಪಳಿಸಿದ ಕಾರ್ಯಕರ್ತರು ಶಿವರಾಮ್ ಹೆಬ್ಬಾರ್ ಪರವಾಗಿಯೂ ಘೋಷಣೆ ಕೂಗಿ ಸಂಭ್ರಮಿಸಿದ್ರು‌. ಈ ವೇಳೆ ಬಿಜೆಪಿಯ ಹಲವು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ರು.