ಮುಂಡಗೋಡ ತಾಲೂಕಿನ ವಡಗಟ್ಟಾ- ಹುನಗುಂದ ರಸ್ತೆಯಲ್ಲಿ ಬೈಕ್ ಗೆ ಕಾಡು ಹಂದಿ ಅಡ್ಡ ಬಂದ ಪರಿಣಾಮ ಬೈಕ್ ಬಿದ್ದು ಸವಾರನಿಗೆ ಗಾಯವಾದ ಘಟನೆ ನಡೆದಿದೆ‌.

ಪ್ರಸಾದ್ ಕುಂಜು (51) ಎಂಬುವವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ನಿನ್ನೆ ರಾತ್ರಿ ಹುನಗುಂದ ಹಾಗೂ ವಡಗಟ್ಟಾ ರಸ್ತೆಯಲ್ಲಿ ಬೈಕ್ ಮೇಲೆ ಬರುತ್ತಿರುವಾಗ ಘಟನೆ ನಡೆದಿದೆ. ಬೈಕ್ ಮೇಲಿಂದ ಬಿದ್ದು ಗಾಯಗೊಂಡು ಒದ್ದಾಡುತ್ತಿದ್ದ ವೇಳೆ ಗ್ರಾಮಸ್ಥರು ರಕ್ಷಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ‌. ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!