ಮುಂಡಗೋಡ: ತಾಲೂಕಿನ ಅತ್ತಿವೇರಿ ದರ್ಗಾ ಹತ್ತಿರ ಅಕ್ರಮವಾಗಿ ಕಟ್ಟಿಕೊಂಡಿದ್ದ ಮನೆಯನ್ನು ಹುನಗುಂದ ಗ್ರಾಮ ಪಂಚಾಯತಿಯವರು ತೆರವುಗೊಳಿಸಿದ್ರು.
ಅತ್ತಿವೇರಿ ಗ್ರಾಮದಲ್ಲಿ ಮನೆ ಹೊಂದಿದ್ದರೂ ಸರ್ಕಾರದ ಗಾಂವಠಾಣ ಜಾಗದಲ್ಲಿ ಮತ್ತೊಂದು ಮನೆ ನಿರ್ಮಿಸಿಕೊಂಡಿದ್ದ ವ್ಯಕ್ತಿಗೆ ಗ್ರಾಮ ಪಂಚಾಯತಿಯಿಂದ ನೋಟೀಸ್ ನೀಡಲಾಗಿತ್ತು. ನೋಟೀಸ್ ಮೂಲಕ ಮನೆ ತೆರವು ಮಾಡಲು ಸೂಚನೆ ನೀಡಲಾಗಿತ್ತು. ಆದ್ರೂ ಸಹಿತ ಮನೆ ತೆರವು ಮಾಡಿಕೊಳ್ಳದ ಕಾರಣ ಇಂದು ಪೊಲೀಸರ ಸಹಾಯದೊಂದಿಗೆ ಅಕ್ರಮ ಮನೆ ತೆರವು ಮಾಡಲಾಯಿತು. ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ ಸೇರಿದಂತೆ ಸಿಬ್ಬಂದಿಗಳು ಅಕ್ರಮ ಮನೆ ತೆರವು ಕಾರ್ಯಾಚರಣೆ ಮಾಡಿದ್ರು.