ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಸವಿನೆನಪಿಗಾಗಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಪಂದ್ಯಾವಳಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.
ಇನ್ನು ಕಬಡ್ಡಿ ಪಂದ್ಯಾವಳಿಗೆ ದೂರ ದೂರದ ಕಬಡ್ಡಿ ತಂಡಗಳು ಬಂದು ಭಾಗವಹಿಸಿವೆ. ಪ್ರಥಮ ಬಹುಮಾನವಾಗಿ 20 ಸಾವಿರ ರೂ. ಎರಡನೇ ಬಹುಮಾನವಾಗಿ 15 ಸಾವಿರ ರೂಪಾಯಿ ಮೂರನೇ ಬಹುಮಾನವಾಗೊ 10 ಸಾವಿರ ರೂಪಾಯಿ, ನಾಲ್ಕನೇ ಬಹುಮಾನವಾಗಿ 5 ಸಾವಿರ ರೂಪಾಯಿ ಇಡಲಾಗಿದೆ. ಇನ್ನು ಪದ್ಯಾವಳಿಯಲ್ಲಿ ಯಾರು ಬಹುಮಾನ ಪಡೆಯುತ್ತಾರೋ ಕಾದು ನೋಡಬೇಕಿದೆ.