ಮುಂಡಗೋಡ: ತಾಲೂಕಿನ ವಿವಿಧ ಅರಣ್ಯ ಅತಿಕ್ರಮಣ ಪ್ರದೇಶಗಳ ಅತಿಕ್ರಮಣದಾರರು, ಇದೇ ಡಿ. 22 ಕ್ಕೆ ‘ಬೆಳಗಾವಿ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ಇಂದು ಕಾರ್ಯಕ್ರಮದ ಪೂರ್ವಭಾವಿ ಸಭೆ ಮುಂಡಗೋಡಿನಲ್ಲಿ ಜರುಗಿತು.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನು ಹಂತ, ಹಂತವಾಗಿ ಒಕ್ಕಲೆಸಲಾಗುವದು ಎಂಬ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳು ಅತಂತ್ರವಾಗಿರುವ ಆತಂಕದಲ್ಲಿ ಇರುವುದರಿಂದ, ಅರಣ್ಯವಾಸಿಗಳ ಪರ ಸರಕಾರ ನಿಲುವು ಪ್ರಕಟಿಸಬೇಕೆಂದು ಆಗ್ರಹಿಸಿ ಡಿ. 22 ರಂದು ‘ಬೆಳಗಾವಿ ಚಲೋ’ ಏರ್ಪಡಿಸಲಾಗಿದೆ ಅಂತಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್ ತಿಳಿಸಿದರು.