ಮುಂಡಗೋಡ: ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡಾಟಿಕೆ ಖಂಡಿಸಿ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟ ಘಟನೆ ಖಂಡಿಸಿ ಮುಂಡಗೋಡಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮೊದಲು ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರಾಯಣ್ಣ ಅಭಿಮಾನಿ ಬಳಗದವರು, ನಂತರ ಮರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು.

ಕನ್ನಡ ಬಾವುಟ ಸುಟ್ಟು ಹಾಕಿರುವುದು ಹಾಗೂ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ದ್ವಂಸ ಮಾಡಿರುವುದು ಖಂಡನೀಯ. ಪದೇ ಪದೇ ಬೆಳಗಾವಿ ಭಾಗದಲ್ಲಿ ಎಂಇಎಸ್ ಪುಂಡರು ಈ ರೀತಿ ಕೃತ್ಯಗಳನ್ನು ಮಾಡುವ ಮೂಲಕ ಕನ್ನಡ ನೆಲದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಇದರಿಂದ ನಮ್ಮ ಕನ್ನಡ ನಾಡಿಗೆ ಧಕ್ಕೆ ಉಂಟಾಗುತ್ತಿದೆ‌. ಇಂತಹ ಕೃತ್ಯಗಳನ್ನು ನೋಡಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೌನಕ್ಕೆ ಜಾರಿರುವುದು ಸರಿಯಲ್ಲ. ಕೂಡಲೇ ಈ ಕೃತ್ಯ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸುವುದರ ಜೊತೆಗೆ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

error: Content is protected !!