ಶಿರಸಿಯ ನಿಡಗೋಡ ಬಳಿ ಪೊಲೀಸ್ ಜೀಪ್ ಪಲ್ಟಿ, ಚಾಲಕ ಗಂಭೀರ, ಪಿಎಸ್ ಐ ಅಪಾಯದಿಂದ ಪಾರು..!

ಶಿರಸಿ: ನಿಡಗೋಡ ಬಳಿ ಸಿದ್ದಾಪುರ ಪೊಲೀಸ್ ಠಾಣೆಯ ಜೀಪ್ ಪಲ್ಟಿಯಾಗಿದೆ. ಪರಿಣಾಮ ಚಾಲಕನಿಗೆ ತೀವ್ರ ಗಾಯವಾಗಿದ್ದು, ವಾಹನದಲ್ಲೇ ಇದ್ದ ಪಿಎಸ್ ಐ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿಯಲ್ಲಿ ನಡೆಯುತ್ತಿರುವ ಪೊಲೀಸ್ ದೈಹಿಕ ಪರೀಕ್ಷೆಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

ಎದುರಿನಿಂದ ಅತಿವೇಗವಾಗಿ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಘಟನೆ ನಡೆದಿದೆ ಎನ್ನಲಾಗಿದ್ದು. ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಕಾಗವಾಡ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ‌. ಇನ್ನು, ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಪಿಎಸ್ಐ ಮಹಾಂತೇಶ ಕುಂಬಾರ ಸಿದ್ದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜೀಪಿನಲ್ಲಿ ಚಾಲಕ ಮತ್ತು ಪಿ.ಎಸ್.ಐ. ಇಬ್ಬರೇ ಇದ್ದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ.

error: Content is protected !!